Google search engine
Home♦️ಇತ್ತೀಚಿನ ಸುದ್ದಿಗಳು.ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಮತ್ತುಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್...

ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಮತ್ತುಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ

ಮಡಿಕೇರಿ ಏ.12:  ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರಾಜಪೇಟೆ ತಾಲ್ಲೂಕು ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಏಪ್ರಿಲ್, 14 ರಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. 

ಈ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!