

ಕುಶಾಲನಗರ, ಏ.02: ಕುಶಾಲನಗರದಲ್ಲಿ ಬಹುತೇಕ ಪೂರ್ಣಗೊಂಡಿರುವ ಒಳಚರಂಡಿ(ಯು ಜಿ ಡಿ) ಸಂಸ್ಕರಣಾ ಘಟಕಕ್ಕೆ ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರು ಭೇಟಿ ನೀಡಿದರು.
ನಂತರ ಕಾಮಗಾರಿಯ ಗುಣಮಟ್ಟ ಹಾಗೂ ಕಾರ್ಯಕ್ಷಮತೆಯನ್ನು ಪರಿಶೀಲಿಸಿದ ಶಾಸಕರು ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಹಲವು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ವಿ.ಪಿ ಶಶಿಧರ್ ರವರು, KUDA ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ರವರು, ಕಾಂಗ್ರೆಸ್ ಮುಖಂಡರಾದ ನಟೇಶ್ ಗೌಡ ರವರು, ಕುಶಾಲನಗರ ಪುರಸಭೆಯ ಮಾಜಿ ನಾಮ ನಿರ್ದೇಶಿತ ಸದಸ್ಯರಾದ ಪ್ರಕಾಶ್ ರವರು, ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.




