

ಕುಶಾಲನಗರ ಡಿ.25: ಕುಶಾಲನಗರ ಪಟ್ಟಣದ ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ ಇಂದು ಕ್ರಿಸ್ ಮಸ್ ಹಬ್ಬದ ಅಂಗವಾಗಿ ದೇವಾಲಯದ ಧರ್ಮ ಗುರುಗಳಾದ ಫಾ. ಮಾರ್ಟಿನ್ ರವರ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಸಂಭ್ರಮ ಸಡಗರದಿಂದ ನಡೆಸಲಾಯಿತು. ನೂರಾರು ಕ್ರೈಸ್ತ ಬಾಂಧವರು ಭಕ್ತಿ ಭಾವದಿಂದ ಕ್ರಿಸ್ಮಸ್ ಆಚರಣೆಯಲ್ಲಿ ಪಾಲ್ಗೊಂಡು ಪರಸ್ಪರ ಶುಭಾಶಯ ಹಂಚಿಕೊಂಡರು.





