
ಸುಂಟಿಕೊಪ್ಪ,ಏ.9: ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ. 29, 30 ರಂದು ಸುಂಟಿಕೊಪ್ಪ ಜಿ. ಎಂ.ಪಿ. ಶಾಲಾ ಮೈದಾನದಲ್ಲಿ ನಡೆಯಲಿದೆ.
ಇಂದು ಸಂಜೆ ಸುಂಟಿಕೊಪ್ಪ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಶಾಸಕರು ಅರ್ಥಿಕ ಸಂಪನ್ಮೂಲ ಕ್ರೂಡೀಕರಣದ ಕುರಿತು ಯಾವುದೇ ಅತಂಕ ಬೇಡ ಸಮ್ಮೇಳನವನ್ನು ಐತಿಹಾಸಿಕವಾಗಿ ಸದಾಕಾಲ ನೆನಪಿಸಿಕೊಳ್ಳುವಂತಹ ಮುಂದಿನ ಎಲ್ಲಾ ಸಮ್ಮೇಳನಗಳಿಗೆ ಮಾದರಿಯಾಗುವಂತಹ ರೀತಿಯಲ್ಲಿ ಅಯೋಜಿಸಬೇಕೆಂದು ಅವರು ಕರೆ ನೀಡಿದರು.
ವಿಶೇಷವಾಗಿ ಯುವಕರು ಮತ್ತು ಮಹಿಳೆಯರನ್ನು ಸಂರ್ಪಕಿಸಿ ಸಾಹಿತ್ಯದ ಕಡೆಗೆ ಅವರನ್ನು ಸೆಳೆಯಬೇಕೆಂದು ಕಿವಿಮಾತು ಹೇಳಿದರು. ಜಿಲ್ಲಾಮಟ್ಟದ ಕಾರ್ಯಕ್ರಮ ವಾಗಿರುವ ಹಿನ್ನಲೆಯಲ್ಲಿ ಸುಂಟಿಕೊಪ್ಪ ಅಥವಾ ಮಡಿಕೇರಿ ಕ್ಷೇತ್ರಕ್ಕೆ ಸಿಮೀತವಾಗಿಸದೆ ಜಿಲ್ಲೆಯ 104 ಗ್ರಾಮ ಪಂಚಾಯಿತಿಗಳನ್ನು ತಲುಪಿ ಜಿಲ್ಲೆಯ ಎಲ್ಲೇಡೆಗಳಿಂದ ಸಾಹಿತ್ಯ ಅಭಿಮಾನಿಗಳು ಆಸಕ್ತರು ಕನ್ನಡಿಗರು ಸಹಾಸ್ರ ಸಹಾಸ್ರ ಸಂಖ್ಯೆ ಬರುವಂತಾಗಬೇಕೆಂದು ಅವರು ಹೇಳಿದರು. ಏ.23ರವರೆಗೆ ಪೂರ್ವ ನಿಗಧಿತ ಕಾರ್ಯಕ್ರಮಗಳಲ್ಲಿ ತಾವು ತೊಡಗಿಕೊಂಡಿದ್ದು ಆನಚಿತದ ದಿನಗಳಲ್ಲಿ ಮುಖ್ಯ ಮಂತ್ರಿಗಳನ್ನು ಭೇಟಿಯಾಗುವದರಿಂದ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರಾಜ್ಯದ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಜಿಲ್ಲೆ ಆಹ್ವಾನಿಸುವ ಕಾರ್ಯಕ್ರಮಗಳಲ್ಲಿ ತಾನು ನೇತೃತ್ವ ವಹಿಸುತ್ತೇನೆಚಿದು ದೃಢವಾಗಿ ನುಡಿದರು.
ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ಮಾತನಾಡಿ ಸುಂಟಿಕೊಪ್ಪ ಹೋಬಳಿಯು ಒಂದಿ ವಿಶಿಷ್ಟ ಭೂ ಪ್ರದೇಶವಾಗಿದ್ದು ಸರ್ವಜನಾಂಗದ ಶಾಂತಿಯ ತೋಟವಾಗಿದೆ ಇಲ್ಲಿ ಕುಶಾಲನಗರ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಐಗೂರಿನಲ್ಲಿ ನಡೆದ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಅಯೋಜನೆಯನ್ನು ಮಾದರಿಯಾಗಿ ಇಟ್ಟುಕೊಂಡು ಸುಂಟಿಕೊಪ್ಪದಲ್ಲಿ ಅತ್ಯಂತ ವಿಜ್ರಂಭಣೆಯಿಂದ ಸಾಹಿತ್ಯ ಸಮ್ಮೇಳನವನ್ನು ಅಯೋಜಿಸಿ ಎಂದು ಕರೆ ನೀಡಿದರು.
ಈ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ತನ್ನದೆಯಾದ ವೈಶಿಷ್ಟö್ಯತೆ ಪರಂಪರೆಯನ್ನು ಹೊಂದಿರುವ ಸುಂಟಿಕೊಪ್ಪ ಹೋಬಳಿಯಲ್ಲಿ ಈ ಸಾಲಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತಿರ್ಮಾನಿಸಲಾಗಿದೆ. ಸಮ್ಮೇಳನವು 2 ದಿನಕಾಲ ನಡೆಯಲಿದ್ದು, 29 ರ ಸಂಜೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮತ್ತು 30 ರಂದು ಸಮ್ಮೇಳನದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಸಮ್ಮೇಳನದ ಯಶಸ್ವಿಗಾಗಿ ಅಂದಾಜು 18 ರಿಂದ19 ಲಕ್ಷ ರೂ ವೆಚ್ಚ ತಗುಲಿದ್ದು ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು 11 ಉಪ ಸಮಿತಿಗಳ ರಚನೆಯಾಗಿದೆ ಈ ಹಿನ್ನಲೆಯಲ್ಲಿ ನಾವೆಲ್ಲಾರೂ ಕನ್ನಡ ಭಾಷೆ ಮತ್ತು ಸಾಹಿತ್ಯದ ಒಂದೇ ದೃಷ್ಟಿಕೋನದ ಹಿನ್ನಲೆಯಲ್ಲಿ ನಾವೆಲ್ಲಾರೂ ಒಂದಾಗಿ ದುಡಿಯೋಣವೆಂದು ಕರೆ ನೀಡಿದರು.
ಹಣಕಾಸು ಸಮಿತಿಯ ಅಧ್ಯಕ್ಷರಾದ ಎ.ಲೋಕೇಶ್‌ಕುಮಾರ್ ಮಾತನಾಡಿ ಈಗಾಗಲೇ ತಮ್ಮ ನೇತೃತ್ವದ ಹಣಕಾಸು ಸಮಿತಿಯು ಸೇರಿದಂತೆ ಎಲ್ಲಾ ಉಪಸಮಿತಿಗಳು ಕಾರ್ಯಪ್ರವೃತವಾಗಿದೆ. ಎಲ್ಲಾರ ಸಹಕಾರದೊಂದಿಗೆ ಸಮ್ಮೇಳನವನ್ನು ಅದ್ಧೂರಿಯಾಗಿ ಅರ್ಥಪೂರ್ಣವಾಗಿ ನಡೆಸೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಮ್ಮೇಳನದ ಯಶಸ್ವಿಯಾಗಿ ರಚಿಸಲಾದ ವಿವಿಧ ಉಪಸಮಿತಿಗಳ ಸಂಚಾಲಕರು ತಮ್ಮ ತಮ್ಮ ಸಮಿತಿಗಳ ಕಾರ್ಯ ಪ್ರಗತಿಯ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸುಂಟಿಕೊಪ್ಪ ಹೋಬಳಿ ಕ.ಸಾ.ಪ. ಅಧ್ಯಕ್ಷರಾದ ಪಿ.ಎಫ್. ಸಬಾಸ್ಟೀನ್,ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ರೇವತಿ ರಮೇಶ್, ಸುಂಟಿಕೊಪ್ಪ ಹೋಬಳಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅನಿಲ್‌ಕುಮಾರ್, ಮಹಿಳಾ ಕಾರ್ಯದರ್ಶಿ ಲೀಲಾ ಮೇದಪ್ಪ, ಸುಂಟಿಕೊಪ್ಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಕನ್ನಡ ಸಂಸ್ಸೃತಿಯ ಇಲಾಖೆಯ ಸಹಾಯ ನಿರ್ದೇಶಕ ಕುಮಾರ್, ಸುಂಟಿಕೊಪ್ಪ ಉಪತಹಶೀಲ್ದಾರ್ ಕೆ.ಎಂ.ದೀಪಿಕಾ, ಚೆಸ್ಕಾಂ ಕಿರಿಯ ಅಭಿಯಂತರ ಲವಕುಮಾರ್,ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಕಸಾಪ ವಿವಿಧ ಪದಾಧಿಕಾರಿಗಳು ಕಸಾಪ ಸದಸ್ಯರುಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು





