ಮಡಿಕೇರಿ ಜೂ.26: ಕೊಡಗು ಪತ್ರಕರ್ತರ ಸಂಘ (ರಿ), ಆಶ್ರಯದಲ್ಲಿ 2026ರ ಸಾಲಿನ ‘ಪತ್ರಿಕಾ ದಿನಾಚರಣೆ’ ಮತ್ತು ‘ವಾರ್ಷಿಕ ಪ್ರಶಸ್ತಿ ಪ್ರದಾನ’ ಸಮಾರಂಭವನ್ನು ಜುಲೈ 1 ರಂದು ಬೆಳಿಗ್ಗೆ 10.30ಕ್ಕೆ ಮಡಿಕೇರಿಯ ಬಿ.ಎಸ್. ಗೋಪಾಲಕೃಷ್ಣ ರಸ್ತೆಯಲ್ಲಿರುವ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಮಾಜಸೇವಕರು ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸಾಬು ವರ್ಗಿಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದು, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಿಕಾಭವನ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವಕಾಮತ್, ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿಕುಮಾರ್ ಜಿ. ವಿ., ಹಾಗೂ ಸಂಘದ ಸ್ಥಾಪಕ ಅಧ್ಯಕ್ಷರಾದ ಎಸ್.ಎ ಮುರಳಿಧರ್ ಅವರು ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮದ ವಿವಿಧ ಸಾಧಕರಿಗೆ ದತ್ತಿ ದಾನಿಗಳಾದ ಬಿ.ಜಿ. ಅನಂತಶಯನ (ಮಡಿಕೇರಿ), ಬಿ.ಆರ್. ನಾಗೇಂದ್ರ ಪ್ರಸಾದ್-ಅಂಜನ್ ಪ್ರಸಾದ್ (ಕುಶಾಲನಗರ), ಭಾಗೀರಥಿ ಮಹಾಂತೇಶ್ (ತಿಪಟೂರು), ಮನೆಯಪಂಡ ಕಾಂತಿ ಸತೀಶ್ (ವಿರಾಜಪೇಟೆ), ನಾಪಂಡ ಮುತ್ತಪ್ಪ (ಬೆಂಗಳೂರು), ನಾಪಂಡ ಮುದ್ದಪ್ಪ (ಬೆಂಗಳೂರು), ಮಂಡಿಬೆಲೆ ರಾಜಣ್ಣ (ಬೆಂಗಳೂರು) ಮತ್ತು ವಿಶ್ವಕುಮಾರ್ ಗುಡ್ಡೆಮನೆ ಇವರುಗಳ ಹೆಸರಿನಲ್ಲಿ ದತ್ತಿ ಪ್ರಶಸ್ತಿಗಳನ್ನು ವಿತರಿಸಲಾಗುವುದು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಹೆಚ್. ಆರ್. ಹರೀಶ್ ಕುಮಾರ್, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಬಿ. ಸಿ ದಿನೇಶ್, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾದ ಮುಧೋಶ್ ಪೂವಯ್ಯ ಹಾಗೂ ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜ್ ಕುಶಾಲಪ್ಪ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಹಾಗೂ ಪದಾಧಿಕಾರಿ ಟಿ.ಕೆ. ಸಂತೋಷ್ ಅವರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ




