Google search engine
Home♦️ಇತ್ತೀಚಿನ ಸುದ್ದಿಗಳು.​ಕೊಡಗು ಸೈನಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

​ಕೊಡಗು ಸೈನಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

​ಕುಶಾಲನಗರ ಜೂ.21:  ಕೊಡಗು  ಸೈನಿಕ ಶಾಲೆಯಲ್ಲಿ ಇಂದು ಜೂನ್ 21ರಂದು 12ನೇ ಅಂತರರಾಷ್ಟ್ರೀಯ ಯೋಗ ದಿನವನ್ನು  ಆಚರಿಸಲಾಯಿತು.

 ಆಯುಷ್ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ನಡೆದ ಈ ಕಾರ್ಯಕ್ರಮವನ್ನು “ಆರೋಗ್ಯಕರ ವಯಸ್ಸಾಗುವಿಕೆಗೆ ಯೋಗ” ಎಂಬ ಧ್ಯೇಯದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಲೆಯ ಪ್ರಭಾರೆ ಪ್ರಾಂಶುಪಾಲರು ಹಾಗೂ ಎನ್‌ಸಿಸಿ ಅಧಿಕಾರಿ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಅವರು ಪಾಲ್ಗೊಂಡಿದ್ದರು. 

ಕಾರ್ಯಕ್ರಮದಲ್ಲಿ ಕೆಡೆಟ್ ಶಾಹಿದ್ ನಾಗವಿ ಸ್ವಾಗತಿಸಿದರೆ, ಕೆಡೆಟ್ ನಿಶಾಂತ್ ನಾರಾಯಣ್ ನಿರೂಪಣೆ ಮಾಡಿದರು. ಈ ಆಚರಣೆಯ ಮುಖ್ಯ ಆಕರ್ಷಣೆಯಾಗಿ ಅನೂಪ್ ಚೌಹಾಣ್ ಅವರು ವಿದ್ಯಾರ್ಥಿಗಳಿಗೆ ಸುಲಭವಾದ ಯೋಗಾಸನಗಳು ಮತ್ತು ಉಸಿರಾಟದ ವ್ಯಾಯಾಮಗಳನ್ನು ಮಾಡಿಸಿ, ಯೋಗದ ಮಹತ್ವವನ್ನು ತಿಳಿಸಿಕೊಟ್ಟರು.

 ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಹಿರಿಯ ಶಿಕ್ಷಕ ಎನ್. ವಿಬಿನ್ ಕುಮಾರ್, ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಯೋಗಾಭ್ಯಾಸ ಮಾಡಿದರು. ಕೊನೆಯಲ್ಲಿ ಕೆಡೆಟ್ ಕೃಷ್ಣ ಎಲ್ಲರನ್ನು ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!