




ಕುಶಾಲನಗರ ಜ.26: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 77 ನೇ ಗಣರಾಜ್ಯೋತ್ಸವವನ್ನು ಪಂಚಾಯತಿ ಆಡಳಿತ ಮಂಡಳಿಯು ಅರ್ಥಪೂರ್ಣವಾಗಿ ಆಚರಿಸಿತು.
ಈ ಸಂದರ್ಭ 2024–25ನೇ ಸಾಲಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಿಕ್ಷಣ, ಆರೋಗ್ಯ, ಚೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಚೆ ಕಚೇರಿ, ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು, ಹಾಗೂ ಗ್ರಾಮ ಪಂಚಾಯಿತಿಯ ಸ್ವಚ್ಛತಾ ಸಿಬ್ಬಂದಿಗಳ ಶ್ಲಾಘನೀಯ ಸೇವೆಯನ್ನು ಗುರುತಿಸಿ ಅವರಿಗೆ ಪಂಚಾಯಿತಿ ವತಿಯಿಂದ ಪ್ರಶಂಸನಾ ಪತ್ರವನ್ನು ನೀಡಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಮಾದಪಟ್ಟಣ ಗ್ರಾಮದ ರಾಷ್ಟ್ರೀಯ ಅಥ್ಲೆಟ್ ಶೈಲ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ಪಂಚಾಯಿತಿಯ ಆವರಣದಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೌಮ್ಯರವರು ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಕಾರ್ಯದರ್ಶಿ ಕುಮಾರಸ್ವಾಮಿಯವರು ಪ್ರಸ್ತಾವಿಕ ನುಡಿಗಳನ್ನು ಆಡಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಮೇಶ್ ನಿರೂಪಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.




