Google search engine
Home♦️ಕೊಡಗಿನ ಗಡಿಯಾಚಿನ ಸುದ್ದಿಗಳುನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು  ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ, ಭೂ ಪರಿವರ್ತನೆ ಈಗ...

ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು  ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ, ಭೂ ಪರಿವರ್ತನೆ ಈಗ ಸರಳ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಡಿ.25: ನಮ್ಮ ದೇಶ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ. ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು  ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ  ಸ್ಪಷ್ಟ ಪಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಇದೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಭೂ ಪರಿವರ್ತನೆಗೆ ಸಂಬಂಧಿಸಿದ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ.

ಈ ಹಿಂದೆ ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ ಎಂದು ತಿಳಿಸಿದರು.

ಆರ್‌ಸಿಸಿಎಂಎಸ್‌ ಸೇರಿದಂತೆ ಡಿಜಿಟೈಸೇಷನ್‌ ಮುಖಾಂತರ ಆದೇಶಗಳನ್ನು ನೀಡಲಾಗುವುದು. ಇವು ಸುಧಾರಣಾ ಕಾನೂನುಗಳಿಗೆ ನ್ಯಾಯಿಕ ಬಲವನ್ನು ಒದಗಿಸಲಿದೆ. ಕಾನೂನು ಮೀರಿ ಯಾರೂ ನ್ಯಾಯಧಾನ ನೀಡಲು ಸಾಧ್ಯವಿಲ್ಲ. ಹೀಗಾಗಿ ವಿವಿಧ ಕಲಂಗಳು ಹಾಗೂ ನಿಯಮಗಳಿಗೆ ತಿದ್ದುಪಡಿ ಮೂಲಕ ಜಾರಿಗೊಳಿಸಲಾಗಿದೆ.

ಕಂದಾಯ ನ್ಯಾಯಾಲಯಗಳನ್ನು ಆನ್‌ಲೈನ್‌ ಮುಖಾಂತರ ನಡೆಸಲು ಕಾನೂನು ತರಲಾಗಿದೆ. ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದಲಿಗೆ ಅವರು ಆನ್‌ಲೈನ್‌ ಮುಖಾಂತರವೇ ನ್ಯಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ. ಅದೇ ರೀತಿ ಭೂ ಸುರಕ್ಷಾ ಮೊಜಣಿಗೆ ಈಗ ಕಾನೂನಿನ ಬಲ ಒದಗಿಸಲಾಗಿದ್ದು, ನಿಯಮಗಳಲ್ಲಿ ಅವಕಾಶ ನೀಡಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!