ಮಡಿಕೇರಿ ಜ.4: ಮಡಿಕೇರಿ ನಗರ ಪೊಲೀಸ್ ಠಾಣೆಯ ಪ್ರಕಟಣೆ………
ಈ ಮೂಲಕ ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಕೊಡಗು ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿರುವ ಬಿಂದು ಮಣಿ ಆರ್. ಎನ್. IPS ರವರು ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಸಂಘ -ಸಂಸ್ಥೆಗಳ,ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ನಾಳೆ ಜ 5 ರಂದು ಬೆಳಿಗ್ಗೆ 11:00 ಗಂಟೆಗೆ ಮಡಿಕೇರಿ ನಗರದ ಮೈತ್ರಿ ಹಾಲ್ ನಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದು ಸದರಿ ಸಭೆಗೆ ತಮ್ಮನ್ನು ನಾವು ಗೌರವ ಪೂರ್ವಕವಾಗಿ ಆಹ್ವಾನಿಸುತ್ತಿದ್ದು ತಾವುಗಳು ಈ ಸಭೆಗೆ ಆಗಮಿಸಿ ವಿಚಾರಗಳನ್ನು ವಿನಿಮಯ ಮಾಡಿಕೊಂಡು ಸದರಿ ಜನ ಸಂಪರ್ಕ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಕೋರಲಾಗಿದೆ..





