
“ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು” ಕಾರ್ಯಕ್ರಮದ ಭಾಗವಾಗಿ ವಿರಾಜಪೇಟೆ ಹಾಗೂ ಗೋಣಿಕೊಪ್ಪದ ಅರೋಗ್ಯ ಕೇಂದ್ರಗಳಲ್ಲಿ ಆಯೋಜನೆಗೊಂಡ ಸರಕಾರದ ಮಹತ್ವಾಕಾಂಕ್ಷೆಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ ಭಾಗಿಯಾಗಿದ್ದರು.
ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಿ ಮಾತನಾಡಿದ ಅವರು ಮಕ್ಕಳ ಸ್ವಾಸ್ತ್ರದ ದೃಷ್ಟಿಯಿಂದ ಡಿಸೆಂಬರ್ 21 ರಿಂದ 24ರ ವರೆಗೆ ನಡೆಯುವ ಅಭಿಯಾನದಲ್ಲಿ ಎಲ್ಲಾ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕೆಂದು ಮನವಿ ಮಾಡಿದರು.




