




ಮಡಿಕೇರಿ, ಮಾ.4:-ನಗರದ ಖಾಸಗಿ ಬಸ್ಸು ನಿಲ್ದಾಣದ ಬಳಿ ಇರುವ ಪತ್ರಿಕಾ ಭವನದಿಂದ ಜಿಲ್ಲಾ ಕೈಗಾರಿಕಾ ಕಚೇರಿ ವರೆಗಿನ ರಸ್ತೆಗೆ ಇಂದು ಶಕ್ತಿ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾದ ಗೋಪಾಲಕೃಷ್ಣ ಅವರ ಹೆಸರನ್ನು ಇಡಲಾಯಿತು. ಗೋಪಾಲಕೃಷ್ಣ ಅವರ ಹೆಸರಿನ ನಾಮಫಲಕವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಉದ್ಘಾಟಿಸಿದರು. ಗೋಪಾಲಕೃಷ್ಣ ಅವರ ಧರ್ಮಪತ್ನಿ ರಾಜಲಕ್ಷ್ಮಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಎಚ್.ಟಿ., ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಜಿ.ಚಿದ್ವಿಲಾಸ್, ಬಿ.ಜಿ.ಅನಂತಶಯನ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.




