
ಮಡಿಕೇರಿ ಜ.3: ನೂತನ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಬಿಂದುಮಣಿ ಅವರು ಮಡಿಕೇರಿಯ ನಗರ ಠಾಣೆ ಮತ್ತು ಸಂಚಾರಿ ಠಾಣೆಗೆ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ನಂತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮತ್ತು ಪತ್ತೆ, ಸಂಚಾರ ಸುವ್ಯವಸ್ಥೆ ಮುಂತಾದ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.





