

ಮಡಿಕೇರಿ ಜ.9: ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಎಂಬ ಗಂಭೀರ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಶಾಸಕ ಡಾ.ಮಂತರ್ ಗೌಡ ರವರು ದಿಢೀರ್ ಭೇಟಿ ನೀಡಿ ಪರಿಶೀಲನೆನಡೆಸಿದರು.
ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಂಬಂಧಿಸಿದವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಬೇಕೆಂದು ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.




