Google search engine
Home♦️ಇತ್ತೀಚಿನ ಸುದ್ದಿಗಳು.ಸುಂದರನಗರಕ್ಕೆ ಶಾಸಕರಾದ ಡಾ.ಮಂತರ್ ಗೌಡ ಭೇಟಿ, ಗ್ರಾಮಸ್ಥರ ಅವಹಾಲುಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ...

ಸುಂದರನಗರಕ್ಕೆ ಶಾಸಕರಾದ ಡಾ.ಮಂತರ್ ಗೌಡ ಭೇಟಿ, ಗ್ರಾಮಸ್ಥರ ಅವಹಾಲುಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ.

ಹಾರಂಗಿ ಜ.4: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡರವರು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರಕ್ಕೆ ಭೇಟಿ ನೀಡಿದರು. ಈ ಸಂದರ್ಭ ಗ್ರಾಮಸ್ಥರು ಸುಂದರನಗರದ ಸ್ಮಶಾನ ಜಾಗದ ದಾಖಲೆಯನ್ನು ಸರಿಪಡಿಸುವ ಕುರಿತು  ಸುಂದರನಗರಕ್ಕೆ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ, ಸಿ.ಎನ್.ಡಿ ಲ್ಯಾಂಡ್ ಸಮಸ್ಯೆ, ಗ್ರಾಮಕ್ಕೆ ಅಂಬೇಡ್ಕರ್ ಭವನ‌ ನಿರ್ಮಾಣ, ಗಣಪತಿ ಪ್ರತಿಷ್ಟಾಪನೆಗೆ ಹಾಗೂ ಗ್ರಾಮಸ್ಥರ ಬಳಕೆಗೆ ಸಮುದಾಯ ಭವನ ನಿರ್ಮಾಣ, ಬಹಳಷ್ಟು‌ ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿರುವ ನಿವೇಶನ ರಹಿತರಿಗೆ ಮನೆ ನೀಡುವುದು ಸೇರಿದಂತೆ ಅನೇಕ  ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತರಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಶಾಸಕರು, ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸುವುದರೊಂದಿಗೆ, ಗ್ರಾಮಸ್ಥರಿಗೆ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ಇತ್ತರು.

 ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಆರ್.ಐ, ಪಿಡಿಒ, ಕೆ.ಐ.ಎ.ಡಿ.ಬಿ‌ ಅಧಿಕಾರಿಗಳು, ಗ್ರಾಮದ ಮುಖಂಡರಾದ ಕಾರ್ತಿಕ್, ತಂಬಿ, ರಫೀಕ್, ಎಸ್.ಎ.ಹರೀಶ್, ಸಂತೋಷ್, ಮಂಜುಕುಟ್ಟಿ, ರವಿ, ಅಭಿಷೇಕ್ ಸೇರಿದಂತೆ ಇನ್ನಿತರ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!