ಬೆಂಗಳೂರು ಜ.3: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 23 ಮತ್ತು 24ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನಡೆಸಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




