ಮಡಿಕೇರಿ ಜ.4: ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು ಮಣಿ ಆರ್. ಎನ್. IPS ರವರು ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಮುಂತಾದ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಾನ್ಯ ನ್ಯಾಯಾಧೀಶೆ ಶ್ರೀಮತಿ ಶುಭಾರವರು ಭಾಗವಹಿಸಿದ್ದರು.





