Google search engine
Home♦️ ಶಿಕ್ಷಣ ,ಆರೋಗ್ಯ,, ಗ್ರಾಮ ಪಂಚಾಯತಿಕೊಡಗು ವಿಶ್ವವಿದ್ಯಾಲಯದಲ್ಲಿ ಜರುಗಿದ ಕುವೆಂಪು ಜನ್ಮೋತ್ಸವ.ರಾಷ್ಟ್ರಕವಿ ಕುವೆಂಪು ಅವರ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ: ಪ್ರೊ.ಅಶೋಕ ಸಂಗಪ್ಪ...

ಕೊಡಗು ವಿಶ್ವವಿದ್ಯಾಲಯದಲ್ಲಿ ಜರುಗಿದ ಕುವೆಂಪು ಜನ್ಮೋತ್ಸವ.ರಾಷ್ಟ್ರಕವಿ ಕುವೆಂಪು ಅವರ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ: ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ

ಕುಶಾಲನಗರ ಜ.5:   ಜಗದ ಕವಿ, ಯುಗದ ಕವಿ, ದಾರ್ಶನಿಕ ಕವಿ ಶ್ರೀಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಆಧ್ಯಾತ್ಮಿಕ ಕಾಣಿಕೆಯನ್ನು, ವೈಚಾರಿಕತೆಯನ್ನೂ ಬಿತ್ತಿದ ಮಹಾನ್‌ಚೇತನ. ಅಪ್ಪಟ ಅಧ್ಯಾತ್ಮ ಜೀವಿಯಾಗಿದ್ದ ಕುವೆಂಪು ಅವರು ರೂಪಿಸಿದ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯಿಸಿದರು.

ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಕನ್ನಡಸಿರಿ ಸ್ನೇಹ ಬಳಗ, ಹಾಗೂ ನಾಡಪ್ರಭು ಪತ್ತಿನ ಸಹಕಾರ ಸಂಘ, ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವಮಾನವ ಕುವೆಂಪುರವರ ಜನ್ಮೋತ್ಸವ ಮತ್ತು -ಸಮಗ್ರ ಸಾಹಿತ್ಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಾ, ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಜನಿಸಿ ಹೋಗಿದ್ದಾರೆ. ಅವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊಂಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಉದ್ದೇಶದಿಂದ ಹುಟ್ಟಿಕೊಂಡ ವಿಶ್ವಮಾನವ ಸಂದೇಶದ ಪರಿಕಲ್ಪನೆಯು ಜಾತಿ ಮತ ಧರ್ಮಗಳನ್ನು ಮೀರಿದ್ದಾಗಿದೆ.  ಈ ವಿಚಾರಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಂ.ಕೆ. ದಿನೇಶ್ ಅವರು ಮಾತನಾಡಿ, ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ – ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು ಮತ್ತು ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷರಾದ ಲೋಕೇಶ್ ಸಾಗರ್ ಬಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕುಶಾಲನಗರದ ರೋಟರಿ ಪೂರ್ವಾಧ್ಯಕ್ಷ ಎಂ. ಡಿ. ರಂಗಸ್ವಾಮಿ,  ಕುಶಾಲನಗರ ಪುರಸಭೆ ಮಾಜಿ ಸದಸ್ಯ ಪ್ರಕಾಶ್,  ಕನ್ನಡ ಸಿರಿ ಸ್ನೇಹ ಬಳಗದ ಪ್ರಮುಖರಾದ. ಕೆ.ಕೆ.ನಾಗರಾಜಶೆಟ್ಟಿ,  ನಿವೃತ್ತ ಶಿಕ್ಷಕರಾದ ಉ.ರಾ. ನಾಗೇಶ್,  ಖಾನ್ ಮಾಸ್ಟರ್, ಹೆಬ್ಬಾಲೆ ನಿವೃತ್ತ ಶಿಕ್ಷಕ ಹೆಚ್.ಎಸ್. ಲೋಕೇಶ್, ವಿವಿಧ ವಿಭಾಗಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಅಧ್ಯಯನ ವಿಭಾಗ ಉಪನ್ಯಾಸಕ ಡಾ. ಜಮೀರ್ ಅಹಮದ್ ನಿರೂಪಿಸಿ, ವಂದಿಸಿದರು.

ಗೋಷ್ಠಿ-ಕಾರ್ಯಕ್ರಮದ ಮೊದಲ ಗೋಷ್ಠಿಯಲ್ಲಿ “ರಾಷ್ಟ್ರಕವಿ ಕುವೆಂಪುರವರ ಸಮಗ್ರ ಸಾಹಿತ್ಯ” ಕುರಿತು ಕಣಿವೆಯ ಖ್ಯಾತ ಸಾಹಿತಿಗಳಾದ ಭಾರದ್ವಾಜ ಕೆ. ಆನಂದತೀರ್ಥ ಅವರು ಉಪನ್ಯಾಸ ನೀಡಿ, ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅಂತಹ ಭಾವನೆ, ಅಂತಹ ದೃಷ್ಟಿ ಕೇವಲ ಒಂದು ಜಾತಿ, ಮತ, ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗುಂಪುಗಾರಿಕೆಗೆಂದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತಂತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸಂಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾಧಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ರಸಪ್ರಶ್ನೆ ಸ್ಪರ್ಧೆ: ವಿಶ್ವಮಾನವ ಕುವೆಂಪುರವರ ಜನ್ಮೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯನ್ನು ಕುಶಾಲನಗರದ ನಿವೃತ್ತ ಶಿಕ್ಷಕರಾದ ಉ.ರಾ. ನಾಗೇಶ್ ಅವರು ನೆರವೇರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!