
ಮಡಿಕೇರಿ ಜ.5: ಇಂದು ಮಡಿಕೇರಿಯ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಮಡಿಕೇರಿ ಉಪ ವಿಭಾಗದ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಕೊಡಗು ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾದ ಬಿಂದುಮಣಿ ಆರ್.ಎನ್ ಅವರು ಜನ ಸಂಪರ್ಕ ಸಭೆಯಲ್ಲಿ ಉಪಸ್ಥಿತರಿದ್ದು, ನಾಗರಿಕ ಸುರಕ್ಷತೆ, ಅಪರಾಧ ತಡೆಗಟ್ಟುವಲ್ಲಿ ನಾಗರಿಕ ಜವಾಬ್ದಾರಿ, ಸಂಚಾರ ಸುರಕ್ಷತೆ ಮುಂತಾದ ವಿಚಾರಗಳು ಹಾಗೂ ಸಾರ್ವಜನಿಕ ಕುಂದು ಕೊರತೆಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.






