ವಿರಾಜಪೇಟೆ, ಮಾ.6: ವಿರಾಜಪೇಟೆ ಪುರಸಭೆ ವ್ಯಾಪ್ತಿಯ ವಾರ್ಡ್ 9 ರ, ಸುಭಾಷ್ ನಗರದಲ್ಲಿ 200ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಯು ಪೂರ್ಣ
ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ವಿಶೇಷ ಅನುದಾನದಲ್ಲಿ ರೂ 15ಲಕ್ಷ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ಧಿಪಡಿಸಲಾಗಿದೆ
ಪೂರ್ಣಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುಣಮಟ್ಟವನ್ನು ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಹಾಗೂ ಪುರಸಭೆಯ ನಿಕಟಪೂರ್ವ ಸದಸ್ಯರಾದ ರಾಫಿ ರವರು ಪರಿಶೀಲನೆ ಮಾಡಿದರು.




