Google search engine
Home♦️ಇತ್ತೀಚಿನ ಸುದ್ದಿಗಳು.ಅಡುಗೆ ಅನಿಲ ಬೆಲೆ ದಿಡೀರ್ ಏರಿಕೆ ಹಿನ್ನೆಲೆ, ಸೌದೆ ಒಲೆಯಲ್ಲಿ ಚಹಾ ತಯಾರಿಸಿ ಸಾರ್ವಜನಿಕರಿಗೆ ವಿತರಿಸಿ...

ಅಡುಗೆ ಅನಿಲ ಬೆಲೆ ದಿಡೀರ್ ಏರಿಕೆ ಹಿನ್ನೆಲೆ, ಸೌದೆ ಒಲೆಯಲ್ಲಿ ಚಹಾ ತಯಾರಿಸಿ ಸಾರ್ವಜನಿಕರಿಗೆ ವಿತರಿಸಿ ಪ್ರತಿಭಟಿಸಿದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ

ಕುಶಾಲನಗರ ಮಾ.17: ಅಡುಗೆ ಅನಿಲದ ಬೆಲೆ ದಿಡೀರ್ ಏರಿಕೆ ಮಾಡಿ ವಾಣಿಜ್ಯ ಬಳಕೆಯ ಅಡುಗೆ ಅನಿಲದ ತೀವ್ರ ಕೊರತೆಯಿಂದ ರಾಷ್ಟ್ರದ ವಾಣಿಜ್ಯ ಚಟುವಟಿಕೆಗಳಿಗೆ ಹಿನ್ನಡೆ ತರುವ ಮೂಲಕ ಕೇಂದ್ರ ಸರಕಾರವು ರಾಷ್ಟ್ರದ ಪರಿಸ್ಥಿತಿಯನ್ನು ‌ಅಯೋಮಯಗೊಳಿಸಿ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗಿ ತನ್ನ ಅಸಹಾಯಕತೆಯನ್ನು ಪ್ರದರ್ಶಿಸಿದೆ ಎಂದು ಆರೋಪಿಸಿ  ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯು  ಇಂದು ಸೌದೆ ಒಲೆಯಲ್ಲಿ ಚಹಾ ತಯಾರಿಸಿ ಸಾರ್ವಜನಿಕರಿಗೆ ವಿತರಿಸುವ ಮೂಲಕ ಪ್ರತಿಭಟಿಸಿ ತನ್ನ ಅಸಹನೆಯನ್ನು ವ್ಯಕ್ತಪಡಿಸಿತು.

ಇಂದು ಸಂಜೆ ಕುಶಾಲನಗರದ ಬ್ಲಾಕ್ ಕಾಂಗ್ರೆಸ್ ಕಛೇರಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸರ್ಕಲ್ ವರೆಗೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ  ಶಶಿಧರ್  ಅವರ ನೇತೃತ್ವದಲ್ಲಿ  ಕಾಂಗ್ರೆಸ್ ಪಕ್ಷದ  ಮುಖಂಡರುಗಳು ಹಾಗೂ ಹಲವಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆನಂತರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡುವುದರ ಮೂಲಕ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!