ಮಡಿಕೇರಿ ಮಾ.30: ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ, ಶಾಂತಿ ಮತ್ತು ಆಧ್ಯಾತ್ಮಿಕ ಶಕ್ತಿಯ ಕೇಂದ್ರವಾಗಿರುವ, ತುಂಗಭದ್ರಾ ನದಿಯ ತೀರದಲ್ಲಿರುವ ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಕುಟುಂಬದ ಸದಸ್ಯರುಗಳೊಂದಿಗೆ ಭೇಟಿ ನೀಡಿ , ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು.




