ಮೈಸೂರು ಮೇ 18: ದುಬಾರೆ ಆನೆ ಬಿಡಾರದಲ್ಲಿ ಇಂದು ಕಂಜ ಹಾಗೂ ಮಾರ್ತಾಂಡ ಆನೆಗಳ ನಡುವೆ ನಡೆದ ಗಲಾಟೆ ನಿಜಕ್ಕೂ ಅತ್ಯಂತ ಆತಂಕಕಾರಿ ಮತ್ತು ದುರದೃಷ್ಟಕರ ಘಟನೆ ಎಂದು ಕೊಡಗು – ಸಂಸದರಾದ ಯದುವೀರ್ ಒಡೆಯರ್ ಅವರು ಕಳವಳ ವ್ಯಕ್ತಪಡಿಸಿದರು.
ಈ ಘಟನೆಯಲ್ಲಿ ಮಹಿಳಾ ಪ್ರವಾಸಿಯೊಬ್ಬರು ಪ್ರಾಣ ಕಳೆದುಕೊಂಡಿರುವುದು ತೀವ್ರ ಹೃದಯವಿದ್ರಾವಕವಾಗಿದೆ ಎಂದು ಶೋಕ ವ್ಯಕ್ತಪಡಿಸಿದ ಅವರು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಕ್ಷಣವೇ ಸೂಕ್ತ ಪರಿಹಾರವನ್ನು ಒದಗಿಸಬೇಕು ಹಾಗೂ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ದುಬಾರೆ ಅನೆ ಬಿಡಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ತರಲು ತಕ್ಷಣವೇ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.




