Google search engine
Home♦️ಇತ್ತೀಚಿನ ಸುದ್ದಿಗಳು.ನೆಲ್ಯಹುದಿಕೇರಿಯಲ್ಲಿ ಕರವೇ (ಸ್ವಾಭಿಮಾನಿ ಬಣ) ನೂತನ ಸದಸ್ಯರ ಸೇರ್ಪಡೆ ಹಾಗೂ ದುಂಡು ಮೇಜಿನ ಸಭೆ

ನೆಲ್ಯಹುದಿಕೇರಿಯಲ್ಲಿ ಕರವೇ (ಸ್ವಾಭಿಮಾನಿ ಬಣ) ನೂತನ ಸದಸ್ಯರ ಸೇರ್ಪಡೆ ಹಾಗೂ ದುಂಡು ಮೇಜಿನ ಸಭೆ

ನೆಲ್ಯಹುದಿಕೇರಿ ಜೂ.24 : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ವಿರಾಜಪೇಟೆ ಹಾಗೂ ಕುಶಾಲನಗರ ತಾಲೂಕಿನ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಮತ್ತು ದುಂಡು ಮೇಜಿನ ಸಭೆಯನ್ನು ಜೂನ್ 25ರ ಗುರುವಾರ ಬೆಳಿಗ್ಗೆ 10:30 ಗಂಟೆಗೆ ನೆಲ್ಯಹುದಿಕೇರಿಯ ವ್ಯವಸಾಯ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 

ಸಂಘಟನೆಯ ರಾಜ್ಯಾಧ್ಯಕ್ಷರಾದ ಪಿ. ಕೃಷ್ಣೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಪ್ರಮುಖ ಸಂಘಟನಾತ್ಮಕ ಸಭೆಯಲ್ಲಿ ಕೊಡಗು ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ, ಕೊಡಗು ಜಿಲ್ಲಾ ಉಸ್ತುವಾರಿ ತನು ಕಿಶೋರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭು (ಬೆಂಗಳೂರು ನಗರ), ಕೊಡಗು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಜಯಶ್ರೀ ಮುರುಗೇಶ್, ಜಿಲ್ಲಾ ಉಪಾಧ್ಯಕ್ಷರಾದ ವಿ.ಎಸ್. ರಾಜಶೇಖರ ಗೌಡ ಹಾಗೂ ಜಿಲ್ಲಾ ಗೌರವಾಧ್ಯಕ್ಷರಾದ ಕೆ. ಚಂದ್ರು ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

 ಅಲ್ಲದೆ, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಬೆಲ್ಲು ಕಾರ್ಯಪ್ಪ, ಕೊಡಗು ಜಿಲ್ಲಾ ಕಾರ್ಯದರ್ಶಿ ಸುರೇಶ್ ನೆಲ್ಲಿಕಲ್, ಕುಶಾಲನಗರ ತಾಲೂಕು ಅಧ್ಯಕ್ಷರಾದ ಕೆ.ಎಸ್. ಶಿವ, ನೆಲ್ಯಹುದಿಕೇರಿ ಘಟಕದ ಅಧ್ಯಕ್ಷರಾದ ಹರೀಶ್ ಪಿ.ಆರ್., ಉಪಾಧ್ಯಕ್ಷರಾದ ರಸಾಧ್ ಎಂ.ಎ. ಮತ್ತು ಕಾರ್ಯದರ್ಶಿ ನಂದ ಆರ್. ಸೇರಿದಂತೆ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ  ಭಾಗವಹಿಸಬೇಕಾಗಿ ಕೊಡಗು ಜಿಲ್ಲಾ ಸಲಹೆಗಾರರಾದ ಸಜಿಲ್ ಕುಮಾರ್ ಎನ್.ಎಂ. ಅವರು ಪ್ರಕಟಣೆಯ ಮೂಲಕ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

error: Content is protected !!