ಶನಿವಾರಸಂತೆ ಪಟ್ಟಣದ ಹೊಸ ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡ್ ಪಕ್ಕದ “ಐಬಿ ರೋಡ್” ಎಂದೇ ಪ್ರಸಿದ್ಧವಾಗಿರುವ, ಸಂತೆಮಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸುಮಾರು ಒಂದು ಕಿಲೋಮೀಟರ್‌ನಷ್ಟು ರಸ್ತೆಯು ಹಲವು ವರ್ಷಗಳಿಂದ ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಭಾರೀ ತೊಂದರೆ ಉಂಟಾಗಿದೆ.
ಈ ರಸ್ತೆಯು ಶನಿವಾರ ಸಂತೆಗೆ ಬರುವ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ನಿತ್ಯ ಬಳಸುವ ಪ್ರಮುಖ ಮಾರ್ಗವಾಗಿದ್ದು, ರಸ್ತೆಯ ದುಃಸ್ಥಿತಿಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ಪ್ರತಿನಿತ್ಯ ಪರದಾಡುವಂತಾಗಿದೆ. ಇಷ್ಟು ವರ್ಷಗಳಿಂದ ಹಾಳಾಗಿರುವ ಈ ರಸ್ತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ತೋರಿರುವ ನಿರ್ಲಕ್ಷ ದೊರಣೆಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಯ ಕುರಿತಾಗಿ ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಸೂಕ್ತ ಕ್ರಮವನ್ನು ಕೈಗೊಳ್ಳಬೇಕಾಗಿ ಗ್ರಾಮಸ್ಥರು ಪರವಾಗಿ ಕಳಕಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ.




