ಕೂಡಿಗೆ.ಆ.9: ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದ ಅಭಿವೃದ್ಧಿಗಾಗಿ ಕೆಆರ್ಐಡಿಎಲ್ (KRIDL) ವತಿಯಿಂದ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅನುದಾನ ಒದಗಿಸಿಕೊಟ್ಟಿದ್ದಕ್ಕಾಗಿ ಶಾಸಕರಾದ ಡಾ. ಮಂತರ್ ಗೌಡ ಹಾಗೂ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ ಶಶಿಧರ್ ಅವರಿಗೆ ಚಿಕ್ಕ ಅಳುವಾರದ ಮಹದೇವ್ ಹಾಗೂ ಗ್ರಾಮಸ್ಥರು ಪತ್ರಿಕಾ ಪ್ರಕಟನೆ ಮೂಲಕ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಈ ಸಿಸಿ ರಸ್ತೆ ಕಾಮಗಾರಿಯಿಂದ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗಲಿದ್ದು, ಮಳೆಗಾಲದಲ್ಲಿ ಎದುರಾಗುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ದೊರಕಿದಂತಾಗಿದೆ ಎಂದು ತಿಳಿಸಿದ್ದಾರೆ.




