ಮಡಿಕೇರಿ: ಮಡಿಕೇರಿ ನಗರ ದಸರಾ ಸಮಿತಿ, ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಅಕ್ಟೋಬರ್ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ, ಕೊಡಗು ವಿದ್ಯಾ ಇಲಾಖೆ ನೌಕರರ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ಎಸ್.ಚೇತನ್, ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್, ಕೊಡಗು ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹಾಗೂ ಫೀ.ಮಾ.ಕಾ.ಕಾಲೇಜು ಹಿಂದಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಸಂಶೋಧಕರು, ಲೇಖಕರು, ಅನುವಾದಕರಾದ ಪ್ರೊ.ಡಾ.ಶ್ರೀಧರ್ ಆರ್.ಹೆಗಡೆ, ಮೈಸೂರು ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರೊಫೆಸರ್, ಪರಸಂಗ ಚಲನಚಿತ್ರದ ಮರಳಿ ಬಾರದೂರಿಗೆ ನಿನ್ನ ಪಯಣ ಹಾಡಿನ ಹೆಸರಾಂತ ಸಾಹಿತಿ ಡಾ.ಎನ್.ಕೆ.ಲೋಲಾಕ್ಷಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ರೈತ ಹೋರಾಟ ಸಮಿತಿ ಅಧ್ಯಕ್ಷರಾದ ಚಕ್ರವರ್ತಿ ಸುರೇಶ್, ಮಡಿಕೇರಿ ದಸರಾ ಸಮಿತಿ ಮಾಜಿ ಕಾರ್ಯಾಧ್ಯಕ್ಷರಾದ ಕೆ.ಎಂ.ಗಣೇಶ್, ರೆಡ್ಕ್ರಾಸ್ ಕೊಡಗು ಘಟಕದ ಸಭಾಪತಿ ಬಿ.ಕೆ.ರವೀಂದ್ರ ರೈ, ಕೊಡಗು ವೈದ್ಯಕೀಯ ಕಾಲೇಜಿನ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಬಿದ್ದಾಟಂಡ ಮೇರಿ ನಾಣಯ್ಯ, ಮೈಸೂರು ಲಕ್ಷ್ಮೀಪುರಂ ಸರ್ಕಾರಿ ಪ್ರೌಢ ಶಾಲೆ ಕನ್ನಡ ಶಿಕ್ಷಕರಾದ ಕೆ.ಎಲ್.ರೋಹಿಣಿ, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಕಾರ್ಯಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬಿತಾ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಪತ್ರಕರ್ತರಾದ ಅನಿಲ್ ಎಚ್.ಟಿ. ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ



ಕಾಮೆಂಟ್ಗಳು (0)