ಮಡಿಕೇರಿ, ಅ.13: ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿಯು ನವೆಂಬರ್ 4 ರಿಂದ 2027ರ ಫೆಬ್ರವರಿ 3 ರವರೆಗೆ ನಡೆಯಲಿದ್ದು, ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಅಕ್ಟೋಬರ್ 15 ರಿಂದ 28 ರವರೆಗೆ ಮಡಿಕೇರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿ.ಪಂ) ಕಚೇರಿ, ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ ಅಥವಾ ಇಲಾಖೆಯ ವೆಬ್ಸೈಟ್ https://horticulturedir.karnataka.gov.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಂಕಪಟ್ಟಿ, ಕನ್ನಡ ವಿಷಯದೊಂದಿಗೆ ಎಸ್ಎಸ್ಎಲ್ಸಿ ಉತ್ತೀರ್ಣರಾದ ಬಗ್ಗೆ ದಾಖಲೆ, ಜನ್ಮ ದಿನಾಂಕದ ಪ್ರಮಾಣ ಪತ್ರ (ಅನ್ವಯಿಸಿದಲ್ಲಿ), ತಂದೆ/ತಾಯಿ/ಪೋಷಕರ ಹೆಸರಿನ ಆರ್ಟಿಸಿ (ಪಹಣಿ), ಪೂರ್ಣ ವಿಳಾಸ ಹಾಗೂ ಸಂಪರ್ಕ ದೂರವಾಣಿ ಸಂಖ್ಯೆ, ಅಗತ್ಯವಿರುವ ಇತರೆ ಪ್ರಮಾಣ ಪತ್ರಗಳು ಮತ್ತು ಐಪಿಒ/ಡಿಡಿ ವಿವರಗಳೊಂದಿಗೆ ಅರ್ಜಿ ಸಲ್ಲಿಸಬೇಕಿದೆ. ತಂದೆ-ತಾಯಿ ಇಲ್ಲದಿದ್ದಲ್ಲಿ, ಪೋಷಕರಿಗೂ ಅಭ್ಯರ್ಥಿಗೂ ಇರುವ ಸಂಬಂಧದ ಕುರಿತು ಗ್ರಾಮ ಲೆಕ್ಕಾಧಿಕಾರಿಗಳ ದೃಢೀಕರಣ ಪತ್ರವನ್ನು ಲಗತ್ತಿಸಬೇಕು. ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಮಡಿಕೇರಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿ.ಪಂ) ಕಚೇರಿಗೆ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 9448407816 ಅಥವಾ 9945853350 ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ
ನ.4 ರಿಂದ ಭಾಗಮಂಡಲದಲ್ಲಿ ಜೇನುಗಾರಿಕೆ ತರಬೇತಿ: ಅ.30 ಅರ್ಜಿ ಸಲ್ಲಿಸಲು ಕೊನೆ ದಿನ
by Kodagu Varadi•ಅಕ್ಟೋಬರ್ 13, 2026BREAKING

ಕಾಮೆಂಟ್ಗಳು (0)