ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸ್ವಾಭಿಮಾನೀ ಬಣದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಹಾಗೂ "ಸರ್ಕಾರಿ ಶಾಲೆಗಳ ಉಳಿವಿಗಾಗಿ ಮುಕ್ತ ಚರ್ಚೆ" ಕಾರ್ಯಕ್ರಮ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರಮುಖ ಪದಾಧಿಕಾರಿಗಳು, ಮುಖಂಡರು ಹಾಗೂ ಐಟಿ-ಬಿಟಿ ವಲಯದ ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಮುಚ್ಚುವ ಹಂತಕ್ಕೆ ತಲುಪಿರುವ ಸರ್ಕಾರಿ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಇದರ ಭಾಗವಾಗಿ, ಸರ್ಕಾರಿ ಶಾಲೆಗಳ ಉಳಿವಿಗಾಗಿ ಶೀಘ್ರದಲ್ಲೇ "ಜೈ ಕನ್ನಡ ಯಾತ್ರೆ" ಅಭಿಯಾನವನ್ನು ಆರಂಭಿಸಲು ಸಂಘಟನೆಯ ಪದಾಧಿಕಾರಿಗಳು ನಿರ್ಧರಿಸಿದರು. ಕೊಡಗು ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ತನು ಕಿಶೋರ್, ಪ್ರಧಾನ ಕಾರ್ಯದರ್ಶಿ ಸುರೇಶ್ ನೆಲ್ಲಿಕಲ್, ಉಪಾಧ್ಯಕ್ಷ ಸಜಿಲ್ ನಾಯರ್, ಕುಶಾಲನಗರ ತಾಲೂಕು ಅಧ್ಯಕ್ಷ ಹರೀಶ್, ಘಟಕ ಅಧ್ಯಕ್ಷ ಗಿರೀಶ್, ಗೌರವ ಅಧ್ಯಕ್ಷ ಹಾಗೂ ಮಾಜಿ ಸೈನಿಕ ಚಂದ್ರು, ಪದಾಧಿಕಾರಿಗಳಾದ ಪ್ರದೀಪ್ ಗೌಡ ಮತ್ತು ದಿನೇಶ್ ಅವರು ಪಾಲ್ಗೊಂಡು ಚರ್ಚೆಯಲ್ಲಿ ಭಾಗವಹಿಸಿದರು.




ಕಾಮೆಂಟ್ಗಳು (0)