Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಕ್ರೀಡೆ

ರಾಜ್ಯದ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 2 ಮೀಸಲಾತಿ

by Kodagu Varadi•ಅಕ್ಟೋಬರ್ 5, 2026BREAKING
ರಾಜ್ಯದ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 2 ಮೀಸಲಾತಿ

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಿ ಕರ್ನಾಟಕ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ. 2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಮೀಸಲಾತಿಯು ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಅನ್ವಯವಾಗಲಿದೆ. ಕನಿಷ್ಠ 10 ವರ್ಷಗಳ ಕಾಲ ಕರ್ನಾಟಕದಲ್ಲಿ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಈ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಇದಲ್ಲದೆ, ಒಲಿಂಪಿಕ್ಸ್ ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ಅಧಿಸೂಚಿತ 34 ಕ್ರೀಡೆಗಳಲ್ಲಿನ ಸಾಧನೆಗೆ ಅನುಗುಣವಾಗಿ ಕೃಪಾಂಕಗಳನ್ನು ನೀಡಲಾಗುವುದು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 2 ಮೀಸಲಾತಿ image 3ರಾಜ್ಯದ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 2 ಮೀಸಲಾತಿ image 4ರಾಜ್ಯದ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 2 ಮೀಸಲಾತಿ image 5

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!