Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಕ್ರೀಡೆ

ವಿರಾಜಪೇಟೆಯ ತೇಜಸ್ ಆಡಿದ ಕರ್ನಾಟಕ ತಂಡಕ್ಕೆ ಅಂಡರ್-19 ರಾಷ್ಟ್ರೀಯ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ

by Kodagu Varadi•ಅಕ್ಟೋಬರ್ 2, 2026
ವಿರಾಜಪೇಟೆಯ ತೇಜಸ್ ಆಡಿದ ಕರ್ನಾಟಕ ತಂಡಕ್ಕೆ ಅಂಡರ್-19 ರಾಷ್ಟ್ರೀಯ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ
ವಿರಾಜಪೇಟೆಯ ತೇಜಸ್ ಆಡಿದ ಕರ್ನಾಟಕ ತಂಡಕ್ಕೆ ಅಂಡರ್-19 ರಾಷ್ಟ್ರೀಯ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ image 1

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾಮದ ಪಿ.ಕೆ. ತೇಜಸ್ ಅವರು ಪ್ರತಿನಿಧಿಸಿದ್ದ ಕರ್ನಾಟಕ ತಂಡ, ಅಂಡರ್-19 ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದಿದೆ. ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ ಈ ಪಂದ್ಯಾವಳಿ ನಡೆಯಿತು. ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಗಳಿಸಿ, ಚಾಂಪಿಯನ್‌ಶಿಪ್ ಪಡೆಯಿತು.

ವಿರಾಜಪೇಟೆಯ ತೇಜಸ್ ಆಡಿದ ಕರ್ನಾಟಕ ತಂಡಕ್ಕೆ ಅಂಡರ್-19 ರಾಷ್ಟ್ರೀಯ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ image 3

ತೇಜಸ್ ಅವರು ಹಾಲುಗುಂದ ಗ್ರಾಮದ ದಿವಂಗತ ಪಿ.ಸಿ. ಕಿನಿಶ್ ಹಾಗೂ ವಿಂಧ್ಯಾ ದಂಪತಿಯ ಪುತ್ರ. ಪ್ರಸ್ತುತ ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ತೇಜಸ್ ಅವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ. ವೀಣಾ ಅವರು ಆಡಳಿತ ಮಂಡಳಿ ಹಾಗೂ ಕಾಲೇಜಿನ ಪರವಾಗಿ ಅಭಿನಂದನೆ ಸಲ್ಲಿಸಿದರು. ಐಕ್ಯೂಎಸಿ ಸಂಯೋಜಕ ಎಲ್.ಆರ್. ರಾಘವೇಂದ್ರ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮುಖ್ಯಸ್ಥ ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!