ಮಡಿಕೇರಿ, ನ.1: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿಯ ಜಿಲ್ಲಾ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೋಶಾಧಿಕಾರಿ ಮುದ್ದಯ್ಯ ಅವರು ಧ್ವಜರೋಹಣ ನೆರವೇರಿಸಿ, ರಾಜ್ಯೋತ್ಸವದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಆಯುಕ್ತ ರಂಜಿತ್ ಕೆ.ಯು., ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ರವಿ ಪಿ.ಎಂ. ಸೇರಿದಂತೆ ಕ್ರೀಡಾ ವಸತಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಧ್ವಜರೋಹಣ
by Kodagu Varadi•ನವೆಂಬರ್ 1, 2026BREAKING

ಕಾಮೆಂಟ್ಗಳು (0)