ಮಡಿಕೇರಿ ಅ 31: ಸ್ವಾತಂತ್ರ್ಯ ಹೋರಾಟಗಾರ, ವೀರ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣ ದಿನದ ಅಂಗವಾಗಿ ಇಂದು ಮಡಿಕೇರಿ ನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಸಲ್ಲಿಸಿದ ಅಪಾರ ತ್ಯಾಗ, ಧೈರ್ಯ ಹಾಗೂ ಹೋರಾಟವನ್ನು ಸ್ಮರಿಸಿ ಗೌರವ ನಮನಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. ಇದೇ ಸಂದರ್ಭ ಸಮಾಜದ ಬಾಂಧವರು , ಗಣ್ಯರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.




ಕಾಮೆಂಟ್ಗಳು (0)