ನೆಲ್ಯಹುದಿಕೇರಿ : ನೆಲ್ಯಹುದಿಕೇರಿ ಗ್ರಾಮದ ನಾಲ್ಕನೇ ವಾರ್ಡ್ ಶಾಲೆ ರಸ್ತೆಯನ್ನು ಕೂಡಲೇ ಅಗಲೀಕರಿಸಿ, ತಿರುವಿನಲ್ಲಿ ತಡೆಗೋಡೆ ನಿರ್ಮಿಸಬೇಕು ಎಂದು ಜೆಡಿಎಸ್ ಗ್ರಾಮ ಸಮಿತಿ ಅಧ್ಯಕ್ಷ ಶಿಯಾಬುದ್ದೀನ್ ಅವರು ಗ್ರಾಮ ಆಡಳಿತವನ್ನು ಒತ್ತಾಯಿಸಿದ್ದಾರೆ. ಈ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದ ಘಟನೆ ನಡೆದಿದ್ದು, ಇದರ ಬೆನ್ನಲ್ಲೇ ಈ ಒತ್ತಾಯ ವ್ಯಕ್ತವಾಗಿದೆ. ಶಾಲೆ ರಸ್ತೆ ಕಿರಿದಾಗಿದ್ದು, ಎರಡು ವಾಹನಗಳು ಒಟ್ಟಿಗೆ ಸಂಚರಿಸಲು ಸಾಧ್ಯವಾಗುತ್ತಿಲ್ಲ. ವಾಹನ ಸಂಚಾರಕ್ಕೆ ಅನಾನುಕೂಲವಾಗಿರುವ ಈ ರಸ್ತೆಯನ್ನು ಕೂಡಲೇ ಅಗಲೀಕರಿಸಿ, ತಡೆಗೋಡೆ ನಿರ್ಮಿಸುವ ಮೂಲಕ ವಾಹನಗಳ ಮುಕ್ತ ಸಂಚಾರಕ್ಕೆ ಹಾಗೂ ಪಾದಚಾರಿಗಳು ಮತ್ತು ಸಾರ್ವಜನಿಕರ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕು ಎಂದು ಅವರು ಹೇಳಿದ್ದಾರೆ. ಗ್ರಾಮ ಆಡಳಿತದ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಸೂಕ್ತವಾದ ತಡೆಗೋಡೆ ನಿರ್ಮಿಸದೇ ಇರುವುದು ಈ ಅಪಾಯಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.



ಕಾಮೆಂಟ್‌ಗಳು (0)