ಸಿದ್ದಾಪುರ: ಬಾಣಂಗಾಲ ಕೆರೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಯ ಬೆನ್ನಲ್ಲೇ, ವಿರಾಜಪೇಟೆ-ಸಿದ್ದಾಪುರ ರಸ್ತೆಯ ಬದಿಯಲ್ಲಿರುವ ಆನಂದಪುರ ಕೆರೆಯ ಸುತ್ತ ತಡೆಗೋಡೆ ನಿರ್ಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ರಸ್ತೆಗೆ ಹೊಂದಿಕೊಂಡೇ ಇರುವ ಈ ಕೆರೆಗೆ ಯಾವುದೇ ತಡೆಗೋಡೆ ಇಲ್ಲದ ಕಾರಣ, ಪ್ರಯಾಣಿಕರು ಹಾಗೂ ವಾಹನ ಸವಾರರಿಗೆ ಅಪಾಯದ ಭೀತಿ ಇದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ. ಈ ಸಂಬಂಧ ತೋಟದ ವ್ಯವಸ್ಥಾಪಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. "ಬಾಣಂಗಾಲ ಕೆರೆಯ ದುರಂತ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆನಂದಪುರ ಕೆರೆಯ ಸುತ್ತ ತಡೆಗೋಡೆ ನಿರ್ಮಿಸಿದರೆ ಸಂಭಾವ್ಯ ಅನಾಹುತಗಳನ್ನು ತಪ್ಪಿಸಬಹುದು" ಎಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ನೆಲ್ಲಿಕ್ಕಲ್ ಅವರು ತಿಳಿಸಿದ್ದಾರೆ. ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಜಿಲ್ ಕುಮಾರ, ವಿರಾಜಪೇಟೆ ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಶಿಕುಮಾರ್, ತಾಲೂಕು ಕಾರ್ಯದರ್ಶಿ ದಿನೇಶ್ ಎ.ಡಿ., ಪದಾಧಿಕಾರಿಗಳಾದ ಶಿವದಾಸ್, ರವಿ, ನಿತೀಶ್ ಎಂ.ಎಚ್., ಶಂಕರ, ಮಣಿ ಹಾಗೂ ಫಾರೂಕ್ ಉಪಸ್ಥಿತರಿದ್ದರು.
ಆನಂದಪುರ ಕೆರೆಗೆ ತಡೆಗೋಡೆ ನಿರ್ಮಿಸಲು ಕರವೇ ಸ್ವಾಭಿಮಾನಿ ಬಣ ಮನವಿ
by Kodagu Varadi•ಅಕ್ಟೋಬರ್ 23, 2026BREAKING

ಕಾಮೆಂಟ್‌ಗಳು (0)