Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಶಿಕ್ಷಣ

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಪ್ರವೇಶ: ಶುಲ್ಕ ಪಾವತಿ ಅವಧಿ ಅ.9ರವರೆಗೆ ವಿಸ್ತರಣೆ

by Kodagu Varadi•ಅಕ್ಟೋಬರ್ 7, 2026BREAKING
ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಪ್ರವೇಶ: ಶುಲ್ಕ ಪಾವತಿ ಅವಧಿ ಅ.9ರವರೆಗೆ ವಿಸ್ತರಣೆ

ಬೆಂಗಳೂರು, ಅ.7: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಲು ಅ.9ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಶುಲ್ಕ ಪಾವತಿಸಿದ ನಂತರ ಅಭ್ಯರ್ಥಿಗಳು ಸೀಟು ಖಾತರಿ ಚೀಟಿಯನ್ನು ಡೌನ್‌ಲೋಡ್ ಮಾಡಿಕೊಂಡು, ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.11ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅ.10ರಂದು ಸಾರ್ವತ್ರಿಕ ರಜೆ ಇರುವುದರಿಂದ ಅಭ್ಯರ್ಥಿಗಳು ಇದನ್ನು ಗಮನದಲ್ಲಿಟ್ಟುಕೊಂಡು ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಪ್ರಾಧಿಕಾರ ಸೂಚಿಸಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಪ್ರವೇಶ: ಶುಲ್ಕ ಪಾವತಿ ಅವಧಿ ಅ.9ರವರೆಗೆ ವಿಸ್ತರಣೆ image 3

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!