Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಕಾಫಿ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕಾಫಿ ಮಂಡಳಿಯಿಂದ ಆರ್ಥಿಕ ನೆರವು: ಅರ್ಜಿ ಆಹ್ವಾನ

by Kodagu Varadi•ಅಕ್ಟೋಬರ್ 21, 2026BREAKING
ಕಾಫಿ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕಾಫಿ ಮಂಡಳಿಯಿಂದ ಆರ್ಥಿಕ ನೆರವು: ಅರ್ಜಿ ಆಹ್ವಾನ

ಮಡಿಕೇರಿ: ಕಾಫಿ ತೋಟ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾಫಿ ಮಂಡಳಿಯು 'ಕಾರ್ಮಿಕ ಕಲ್ಯಾಣ ಕ್ರಮಗಳು – ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು' ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ನೋಂದಾಯಿತ ಕಾಫಿ ತೋಟಗಳು ಹಾಗೂ ಪರವಾನಗಿ ಪಡೆದ ಕಾಫಿ ಕ್ಯೂರಿಂಗ್ ವರ್ಕ್ಸ್‌ಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಅರ್ಹ ಮಕ್ಕಳು ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಕಲೆ, ವಿಜ್ಞಾನ, ವಾಣಿಜ್ಯ ಮೊದಲಾದ ಸಾಂಪ್ರದಾಯಿಕ ಕೋರ್ಸ್‌ಗಳಲ್ಲಿ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ₹7,500 ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವವರಿಗೆ ₹15,000 ಪ್ರೋತ್ಸಾಹ ಧನ ನೀಡಲಾಗುತ್ತದೆ. ವೃತ್ತಿಪರ ಕೋರ್ಸ್‌ಗಳ ಪೈಕಿ ವೈದ್ಯಕೀಯ ವಿಜ್ಞಾನ ಓದುತ್ತಿರುವ ವಿದ್ಯಾರ್ಥಿಗಳಿಗೆ ₹20,000 ಸಿಗಲಿದೆ. ಅಲ್ಲದೆ ಕೃಷಿ ಮತ್ತು ಸಂಬಂಧಿತ ವಿಜ್ಞಾನ, ಪಶುಸಂಗೋಪನೆ, ಎಂಜಿನಿಯರಿಂಗ್, ಫಾರ್ಮಸಿ, ನರ್ಸಿಂಗ್ ಹಾಗೂ ಇತರ ಸಮಾನ ವೃತ್ತಿಪರ ಪದವಿಗಳ ವಿದ್ಯಾರ್ಥಿಗಳಿಗೂ ₹20,000 ನೆರವು ದೊರೆಯಲಿದೆ. ಆಸಕ್ತ ಕಾಫಿ ಬೆಳೆಗಾರರು ಮತ್ತು ಎಸ್ಟೇಟ್ ಕಾರ್ಮಿಕರು ತಮ್ಮ ಮಕ್ಕಳ ಪರವಾಗಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಕಾಫಿ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕಾಫಿ ಮಂಡಳಿಯಿಂದ ಆರ್ಥಿಕ ನೆರವು: ಅರ್ಜಿ ಆಹ್ವಾನ image 3ಕಾಫಿ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕಾಫಿ ಮಂಡಳಿಯಿಂದ ಆರ್ಥಿಕ ನೆರವು: ಅರ್ಜಿ ಆಹ್ವಾನ image 4

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!