Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಅಕ್ಟೋಬರ್ 19 ಕೊನೆಯ ದಿನ

by Kodagu Varadi•ಅಕ್ಟೋಬರ್ 9, 2026BREAKING
ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಅಕ್ಟೋಬರ್ 19 ಕೊನೆಯ ದಿನ

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯಿತಿಯ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸ್ಥಾನಗಳನ್ನು ಆವರ್ತನೆ ಆಧಾರದ ಮೇಲೆ ವಿವಿಧ ಪ್ರವರ್ಗಗಳಿಗೆ ಮೀಸಲಿರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರಡು ಅಧಿಸೂಚನೆ ಹೊರಡಿಸಿದ್ದು, ಈ ಹಿಂದೆ ಹೊರಡಿಸಲಾಗಿದ್ದ ಎಲ್ಲಾ ಅಧಿಸೂಚನೆಗಳನ್ನು ರದ್ದುಪಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 162 ಹಾಗೂ 2023ರ ನಿಯಮಗಳನ್ವಯ ಈ ಹೊಸ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ​ಪ್ರಕಟಿತ ಕರಡು ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತರು ಅಕ್ಟೋಬರ್ 19, 2026ರ ಸೋಮವಾರ ಸಂಜೆ 5.00 ಗಂಟೆಯ ಒಳಗಾಗಿ ಬೆಂಗಳೂರಿನ ಬಹುಮಹಡಿಗಳ ಕಟ್ಟಡದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ (ಪಂಚಾಯತ್ ರಾಜ್) ಖುದ್ದಾಗಿ ಅಥವಾ ಅಂಚೆ ಮೂಲಕ ಆಕ್ಷೇಪಣೆಗಳನ್ನು ತಲುಪಿಸಬಹುದಾಗಿದೆ. ನಿಗದಿತ ಸಮಯದ ನಂತರ ಬರುವ ಹಾಗೂ ಅಂಚೆ ವಿಳಂಬದಿಂದ ತಡವಾಗಿ ತಲುಪುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಅಕ್ಟೋಬರ್ 19 ಕೊನೆಯ ದಿನ image 3ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಅಕ್ಟೋಬರ್ 19 ಕೊನೆಯ ದಿನ image 4

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!