ಬೆಂಗಳೂರು: 2027ರ ಮಾರ್ಚ್/ಏಪ್ರಿಲ್ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ಹೆಸರು ನೋಂದಾಯಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಅವಕಾಶ ಕಲ್ಪಿಸಿದೆ. ಅರ್ಹ ವಿದ್ಯಾರ್ಥಿಗಳು ಮಂಡಲಿಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಗೆ ಅವಕಾಶವಿರುವುದಿಲ್ಲ. ವಿದ್ಯಾರ್ಥಿಯ ಹೆಸರು, ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ, ಮಾಧ್ಯಮ ಹಾಗೂ ವಿಷಯಗಳ ಸಂಯೋಜನೆಯ ವಿವರಗಳು ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳಲ್ಲಿ ನಮೂದಾಗುತ್ತವೆ. ಆದ್ದರಿಂದ ಅರ್ಜಿ ಭರ್ತಿ ಮಾಡುವಾಗ ತಪ್ಪುಗಳಾಗದಂತೆ ಎಚ್ಚರ ವಹಿಸಬೇಕು ಎಂದು ಮಂಡಲಿ ಸೂಚಿಸಿದೆ. ಶುಲ್ಕ ಪಾವತಿಸಿ ಅಂತಿಮ ಅರ್ಜಿ ಸಲ್ಲಿಸಿದ ನಂತರ ಯಾವುದೇ ವಿವರಗಳನ್ನು ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ. ಹೀಗಾಗಿ ಎಲ್ಲಾ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿದ ನಂತರವೇ ಅರ್ಜಿಯನ್ನು ಅಪ್ಲೋಡ್ ಮಾಡುವಂತೆ ತಿಳಿಸಲಾಗಿದೆ. ದಂಡರಹಿತ ಅರ್ಜಿ ಸಲ್ಲಿಕೆಗೆ 2026ರ ನವೆಂಬರ್ 21 ಕೊನೆಯ ದಿನವಾಗಿದೆ.
ಖಾಸಗಿ ಅಭ್ಯರ್ಥಿಗಳಿಗೂ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಣಿ ಅವಕಾಶ: ನ.21 ಕೊನೆಯ ದಿನ
by Kodagu Varadi•ಅಕ್ಟೋಬರ್ 16, 2026BREAKING

ಕಾಮೆಂಟ್ಗಳು (0)