Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ: ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ

by Kodagu Varadi•ಅಕ್ಟೋಬರ್ 14, 2026BREAKING
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ:   ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ

ಭಾಗಮಂಡಲ ಅ.14: ಪವಿತ್ರ ಕಾವೇರಿ ತೀರ್ಥೋದ್ಭವದ ಧಾರ್ಮಿಕ ಆಚರಣೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಲಕಾವೇರಿಯ ಕಾವೇರಿ ಉಗಮ ಸ್ಥಾನ ಹಾಗೂ ಭಾಗಮಂಡಲದ ಶ್ರೀ ಭಗಂಡಿಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಬರುವ ಅಕ್ಟೋಬರ್ 17 ರಂದು ರಾತ್ರಿ 7:50 ಗಂಟೆಗೆ ಕಾವೇರಿ ತೀರ್ಥೋದ್ಭವ ಜರುಗಲಿದೆ. ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ನಿರ್ದೇಶನ ಮತ್ತು ಸೂಚನೆ ಮೇರೆಗೆ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ. ಭಾಗಮಂಡಲದ ತ್ರಿವೇಣಿ ಸಂಗಮ ದಲ್ಲಿರುವ ಮರಳುಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ ವಿಸ್ತಾರಗೊಳಿಸಲಾಗುತ್ತಿದೆ .ಮತ್ತು ತಲಕಾವೇರಿಯಲ್ಲಿ ತೀರ್ಥೋದ್ಭವದ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳ ಸುಗಮ ಓಡಾಟಕ್ಕೆ ಅನುಕೂಲವಾಗುವಂತೆ ವಿಶೇಷ ಪಾದಚಾರಿ ಮಾರ್ಗಗಳನ್ನು ಸಿದ್ಧಪಡಿಸಲಾಗುತ್ತಿದೆ. ದೇವಸ್ಥಾನದ ಒಳಾಂಗಣದ ನೆಲಹಾಸು ಹಾಗೂ ನೂತನ ಹೊಡಿಕೆಗಳನ್ನು ಅಳವಡಿಸುವ ಮೂಲಕ ದೇವಸ್ಥಾನದ ಒಟ್ಟಾರೆ ಸೌಂದರ್ಯವನ್ನು ಹೆಚ್ಚಿಸುವ ಕೆಲಸಗಳು ಭರದಿಂದ ನಡೆಯುತ್ತಿವೆ . ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಅಪಾರ ಜಿಲ್ಲಾಧಿಕಾರಿ ನಿರಂಜನ್ ಎಂ ಎನ್ ಅವರು ದೇವಾಲಯದ ಕಾರ್ಯನಿರ್ವಹಣಾ ಅಧಿಕಾರಿ ಚಂದ್ರಶೇಖರ್ ಹಾಗೂ ಪಾರು ಪತ್ತೆದಾರ ಕೆ.ಪಿ ಪೊನ್ನಣ್ಣ ಅವರಿಗೆ ಸೂಕ್ತ ನಿರ್ದೇಶನ ಮತ್ತು ಸೂಚನೆ ನೀಡಿದರು. ✍️ ದುಗ್ಗಳ ಸದಾನಂದ.

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ:   ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ image 3ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ:   ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ image 4ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ:   ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ image 5

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!