ನಾಪೋಕ್ಲು: ಪೆರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ (ನಿ.) ವತಿಯಿಂದ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆ ಹಾನಿಗೊಳಗಾಗಿದ್ದ ಸಂಘದ ಸದಸ್ಯೆ ಯಶೋದ ಕೆ.ಎಸ್. ಅವರಿಗೆ ಪರಿಹಾರ ಧನದ ಚೆಕ್ ವಿತರಿಸಲಾಯಿತು. ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಸಂತ್ರಸ್ತೆಗೆ ರೂ. 10,000/- (ಹತ್ತು ಸಾವಿರ) ಪರಿಹಾರ ಧನದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, "ಸಂಸ್ಥೆಯ ಸದಸ್ಯರ ಕಷ್ಟ-ಸುಖಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಪ್ರಾಕೃತಿಕ ವಿಕೋಪದಿಂದ ತೊಂದರೆಗೊಳಗಾದ ಸದಸ್ಯರಿಗೆ ಸಂಸ್ಥೆಯ ವತಿಯಿಂದ ಸಣ್ಣ ನೆರವು ನೀಡಲಾಗುತ್ತಿದೆ" ಎಂದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಅಶೋಕ ಪೆರುಮುಂಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು. - ವರದಿ ✍️ ದುಗ್ಗಳ ಸದಾನಂದ
ಪೆರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ ಸಂತ್ರಸ್ತೆಗೆ ಪರಿಹಾರ ಧನ ವಿತರಣೆ
by Kodagu Varadi•ಅಕ್ಟೋಬರ್ 25, 2026BREAKING

ಕಾಮೆಂಟ್‌ಗಳು (0)