Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ರಾಜ್ಯ

ಭೂಮಾಪಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ತಾತ್ಕಾಲಿಕ ಫಲಿತಾಂಶ ಪ್ರಕಟ

by Kodagu Varadi•ಅಕ್ಟೋಬರ್ 10, 2026BREAKING
ಭೂಮಾಪಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು, ಅ.10: ಉಳಿಕೆ ಮೂಲ ವೃಂದದ ಭೂಮಾಪಕರು ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಭೂಮಾಪಕರು ಹುದ್ದೆಗಳ ನೇಮಕಾತಿ ಸಂಬಂಧ ಪ್ರಾಧಿಕಾರವು ಅಕ್ಟೋಬರ್ 2ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಯ ಕೀ ಉತ್ತರಗಳನ್ನು ಅಕ್ಟೋಬರ್ 3ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 5ರವರೆಗೆ ಅವಕಾಶ ನೀಡಲಾಗಿತ್ತು. ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿದ ಬಳಿಕ, ಪರಿಷ್ಕೃತ ಕೀ ಉತ್ತರಗಳನ್ನು ಅಕ್ಟೋಬರ್ 9ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಪರಿಷ್ಕೃತ ಕೀ ಉತ್ತರಗಳ ಆಧಾರದ ಮೇಲೆ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನೂ ಅಂದೇ ಪ್ರಕಟಿಸಲಾಗಿದೆ. ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಅಕ್ಟೋಬರ್ 11ರ ಬೆಳಿಗ್ಗೆ 11 ಗಂಟೆಯೊಳಗೆ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ ಮೂಲಕ ಸಲ್ಲಿಸಬೇಕು. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಹಾಗೂ ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!