Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಮಹಾಲಯ ಅಮಾವಾಸ್ಯೆ: ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತಸಾಗರ, ಪಿಂಡ ಪ್ರದಾನ

by Kodagu Varadi•ಅಕ್ಟೋಬರ್ 11, 2026BREAKING
ಮಹಾಲಯ ಅಮಾವಾಸ್ಯೆ: ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತಸಾಗರ, ಪಿಂಡ ಪ್ರದಾನ

ಭಾಗಮಂಡಲ: ಮಹಾಲಯ ಅಮಾವಾಸ್ಯೆಯ ಪವಿತ್ರ ದಿನದಂದು ಕಾವೇರಿ, ಕನ್ನಿಕೆ ಹಾಗೂ ಗುಪ್ತಗಾಮಿನಿ ಸುಜ್ಯೋತಿ ನದಿಗಳ ಪವಿತ್ರ 'ತ್ರಿವೇಣಿ ಸಂಗಮ'ದಲ್ಲಿ ಪಿತೃ ತರ್ಪಣ ಮತ್ತು ಪಿಂಡ ಪ್ರದಾನ ನೆರವೇರಿಸಲು ಶನಿವಾರ ಸಾವಿರಾರು ಭಕ್ತಾದಿಗಳು ಹರಿದು ಬಂದಿದ್ದು, ಇಡೀ ಕ್ಷೇತ್ತ್ರದಲ್ಲಿ ಕಿಕ್ಕಿರಿದ ಜನಸಂದಣಿ ಕಂಡುಬಂತು. ತಮ್ಮ ಅಗಲಿದ ಹಿರಿಯರ, ಕುಟುಂಬದ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೋಕ್ಷ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಕೇಶ ಮುಂಡನದೊಂದಿಗೆ ಪವಿತ್ರ ತೀರ್ಥ ಸ್ನಾನ ಮಾಡಿ, ಶ್ರದ್ಧಾ ಭಕ್ತಿಯಿಂದ ಶಾಸ್ತ್ರೋಕ್ತವಾಗಿ ಪಿತೃ ತರ್ಪಣ ನೆರವೇರಿಸಿದರು. ಈ ಸಂದರ್ಭ ಕೊಡಗು ಜಿಲ್ಲೆಯ ವಿವಿಧ ಭಾಗಗಳು ಮಾತ್ರವಲ್ಲದೆ, ಹೊರ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದಲೂ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಮುಂಜಾನೆಯಿಂದಲೇ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದರು. ಪಿತೃ ತರ್ಪಣ ಕಾರ್ಯಕ್ರಮಗಳ ನಂತರ ಭಕ್ತಾದಿಗಳು ಭಾಗಮಂಡಲದ ಶ್ರೀ ಭಗಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹಾಗೂ ತಲಕಾವೇರಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಧನ್ಯತೆ ಮೆರೆದರು. ಭಕ್ತರ ಅನುಕೂಲಕ್ಕಾಗಿ ಕ್ಷೇತ್ರದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿತ್ತು. ✍️ವರದಿ ದುಗ್ಗಳ ಸದಾನಂದ

ಮಹಾಲಯ ಅಮಾವಾಸ್ಯೆ: ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತಸಾಗರ, ಪಿಂಡ ಪ್ರದಾನ image 3

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!