ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ಗಳ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು 24ನೇ ತಾರೀಕಿನೊಳಗೆ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಅಂದೇ ಮಧ್ಯಾಹ್ನ 4 ಗಂಟೆಯೊಳಗೆ ಸೀಟು ಹಂಚಿಕೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ಹಾಗೂ 25ನೇ ತಾರೀಕಿನೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಾರ್ಯನಿರ್ವಾಹಕ ನಿರ್ದೇಶಕರಾದ ಎಚ್. ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್ಗಳು (0)