ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈಗ 2026ರ ನವೆಂಬರ್ 16ರವರೆಗೆ ಅರ್ಜಿ ಸಲ್ಲಿಸಬಹುದು. ಪ್ರಾಥಮಿಕ ಶಾಲಾ ಶಿಕ್ಷಕರು (ಪಿಎಸ್‌ಟಿ), ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (ಜಿಪಿಟಿ), ಸಿಎಸ್‌ಟಿ, ಪ್ರೌಢಶಾಲಾ ಸಹ ಶಿಕ್ಷಕರು (ಎಚ್‌ಎಸ್‌ಟಿ) ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್-1 ಮತ್ತು ಗ್ರೇಡ್-2 ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ, ತಕ್ಷಣವೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಇಲಾಖೆ ಕೋರಿದೆ. ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಎದುರಾದರೆ, ಸಹಾಯವಾಣಿ ಸಂಖ್ಯೆಗಳಾದ 080-22483145, 22483140 ಅಥವಾ 9449588020 ಗೆ ಕರೆ ಮಾಡಿ ಪರಿಹಾರ ಪಡೆಯಬಹುದು. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು schooleducation.karnataka.gov.in/cacell ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಶಿಕ್ಷಕರ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ಎರಡನೇ ಬಾರಿ ವಿಸ್ತರಣೆ, ನ.16 ಕೊನೆಯ ದಿನ
by Kodagu Varadi•ಅಕ್ಟೋಬರ್ 24, 2026BREAKING

ಕಾಮೆಂಟ್‌ಗಳು (0)