ಗೋಣಿಕೊಪ್ಪಲು, ಅ.20: ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಸರ್ಕಾರದ ಉಚಿತ ವೈದ್ಯಕೀಯ ಯೋಜನೆಗಳ ಸೌಲಭ್ಯ ದೊರಕಿಸಿಕೊಡುತ್ತಿರುವ ಸಮಾಜಸೇವಕ ಚೋಕಂಡ ಸಂಜು ಸುಬ್ಬಯ್ಯ ಅವರನ್ನು ಗೋಣಿಕೊಪ್ಪಲಿನಲ್ಲಿ ನಡೆದ ಕಾವೇರಿ ಯುವ ದಸರಾ ಸಮಿತಿಯ ವೇದಿಕೆಯಲ್ಲಿ ಸೋಮವಾರ (19-10-2026) ಸನ್ಮಾನಿಸಲಾಯಿತು. ಆಸ್ಪತ್ರೆಗಳಲ್ಲಿ ರೋಗಿಗಳು ಎದುರಿಸುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಇವರು, ಈವರೆಗೆ 1,400ಕ್ಕೂ ಹೆಚ್ಚು ಜನರಿಗೆ ವೈದ್ಯಕೀಯ ಸೇವೆ ದೊರಕಿಸಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಯುವ ದಸರಾ ಸಮಿತಿ ಅಧ್ಯಕ್ಷ ನಾಮೇರ ಅಂಕಿತ್ ಪೊನ್ನಪ್ಪ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನ ನೆರವೇರಿತು.



ಕಾಮೆಂಟ್ಗಳು (0)