Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಪುತ್ಥಳಿಗೆ ಪುಷ್ಪನಮನ

by Kodagu Varadi•ಅಕ್ಟೋಬರ್ 31, 2026BREAKING
ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಪುತ್ಥಳಿಗೆ ಪುಷ್ಪನಮನ

ಮಡಿಕೇರಿ ಅ 31: ಸ್ವಾತಂತ್ರ್ಯ ಹೋರಾಟಗಾರ, ವೀರ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣ ದಿನದ ಅಂಗವಾಗಿ ಇಂದು ಮಡಿಕೇರಿ ನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಸಲ್ಲಿಸಿದ ಅಪಾರ ತ್ಯಾಗ, ಧೈರ್ಯ ಹಾಗೂ ಹೋರಾಟವನ್ನು ಸ್ಮರಿಸಿ ಗೌರವ ನಮನಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. ಇದೇ ಸಂದರ್ಭ ಸಮಾಜದ ಬಾಂಧವರು , ಗಣ್ಯರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಪುತ್ಥಳಿಗೆ ಪುಷ್ಪನಮನ image 3ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಪುತ್ಥಳಿಗೆ ಪುಷ್ಪನಮನ image 4ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಪುತ್ಥಳಿಗೆ ಪುಷ್ಪನಮನ image 5

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!