Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಹಳೆತಾಲೂಕು ಅಂಗನವಾಡಿಯಲ್ಲಿ ‘ಪೋಷಣ್ ಅಭಿಯಾನ’ ಮಾಸಾಚರಣೆ

by Kodagu Varadi•ಅಕ್ಟೋಬರ್ 10, 2026BREAKING
ಹಳೆತಾಲೂಕು ಅಂಗನವಾಡಿಯಲ್ಲಿ ‘ಪೋಷಣ್ ಅಭಿಯಾನ’ ಮಾಸಾಚರಣೆ

ನಾಪೋಕ್ಲು : ಇಲ್ಲಿಗೆ ಸಮೀಪದ ಹಳೆತಾಲೂಕು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕುಲ್ಲೇಟಿರ ಅರುಣ್ ಬೀಬ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಿಲ್ಲಾ ಶಿಶು ಅಭಿವೃದ್ಧಿ ಉಪನಿರ್ದೇಶಕಿ ಸುಮಂಗಲ ಜಿ. ಹಿರೇಮಠ ಉದ್ಘಾಟಿಸಿ, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿಸಿದರು. ನಿರೂಪಣಾಧಿಕಾರಿ ಪ್ರಸನ್ನ ಕುಮಾರ್ ಮಾತನಾಡಿ, ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟುವುದು ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಡಿ.ಎಚ್. ಮಾತನಾಡಿ, 2018ರಿಂದ ಈ ಅಭಿಯಾನವನ್ನು ಆಚರಿಸಲಾಗುತ್ತಿದ್ದು, ಆರೋಗ್ಯಕರ ಆಹಾರ ಸೇವನೆಯ ಅಗತ್ಯವನ್ನು ವಿವರಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅಭಿನಂದನ ಪತ್ರವನ್ನು ವಿತರಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಪೋಷಣ್ ಅಭಿನಂದನಾ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಾಪೋಕ್ಲು ಮಹಿಳಾ ಸಮಾಜದ ಅಧ್ಯಕ್ಷೆ ಬಿದ್ಡಾಟಂಡ ಮೇರಿ ಚಿಟ್ಟಪ್ಪ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಪಿ. ಎಂ. ಅರಫಾತ್, ಆರೋಗ್ಯ ಇಲಾಖೆಯ ವೇದಾವತಿ ಬಾಣಂತಿಯರು. ಕಿಶೋರಿಯರು, ಸಂಘದ ಸದಸ್ಯರು, ತಾಯಂದಿರು, ಭಗವತಿ ಮಹಿಳಾ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀತಾಲಕ್ಷ್ಮಿ ಸ್ವಾಗತಿಸಿ, ಭಾಗ್ಯವತಿ ನಿರೂಪಿಸಿ ಮೇಲ್ವಿಚಾರಕಿ ಶೀಲಾ ಅಶೋಕ್ ವಂದಿಸಿದರು. ✍️-ವರದಿ ದುಗ್ಗಳ ಸದಾನಂದ.

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!